HomeKarnatakaಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು......: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು……: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಿಹಾರದ ಪಾಟ್ನಾದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, “ಮೋದಿ ಕಾ ಬಾಪ್‌ ಭಿ ಜಾಯೆಗಾ” (ಮೋದಿ ಅವರ ಅಪ್ಪನೂ ಹೋಗಬೇಕಾಗುತ್ತದೆ) ಎಂಬ ಖರ್ಗೆ ಹೇಳಿಕೆ ವಿರುದ್ಧ ದೇಶಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಈ ನಡುವೆ ಬಿಜೆಪಿ ಮಿತ್ರ ಪಕ್ಷ ಜೆಡಿಎಸ್ ಕೂಡ ಖರ್ಗೆ ಹೇಳಿಕೆಯನ್ನು ಖಂಡಿಸಿದೆ. ಮಲ್ಲಿಕಾಅರ್ಜುನ ಖರ್ಗೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಹೆವ್ಹ್.ಡಿ.ಕುಮಾರಸ್ವಾಮಿ, ದಾಅಸರ ಪದವನ್ನು ಪ್ರಸ್ತಾಪಿಸಿ ಬುದ್ಧಿವಾದ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರದ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎಂದು ಶ್ರೀ ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಪ್ರಧಾನಿಗಳ ಪೂಜ್ಯ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ. ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?

ಪಾಟ್ನಾದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದ ಮಲ್ಲಿಕಾಅರ್ಜುನ್ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಕೋಪದ ಬರದಲ್ಲಿ ಅವರ ಅಪ್ಪನನ್ನೂ ಬೈದಿದ್ದರು. “ಮೋದಿ ಕಾ ಬಾಪ್‌ ಭಿ ಜಾಯೆಗಾ” (ಮೋದಿ ಅವರ ಅಪ್ಪನೂ ಹೋಗಬೇಕಾಗುತ್ತದೆ) ಎಂಬ ಖರ್ಗೆ ಹೇಳಿಕೆ ಭಾರೀ ವಿವಾದಕ್ಕೆ ಕರಣವಾಗಿದ್ದು, ಬಿಜೆಪಿ ಖರ್ಗೆ ವಿರುದ್ಧ ದೂರು ದಾಖಲಿಸಿದೆ.

ಮಲ್ಲಿಕಾರ್ಜುನ ಖರ್ಗೆ ಅವರು “ಪ್ರಧಾನಿ ಮೋದಿ ಅವರು ಜೈಲಿಗೆ ಹೋಗಲಿದ್ದಾರೆ” ಎಂದು ಹೇಳಿದರು. ಈ ವೇಳೆ ಸಭೆಯಲ್ಲಿ ಹಾಜರಿದ್ದ ಸಂತೋಷ್‌ ಕುಮಾರ್‌ ಎಂಬಾತ “ಮೋದಿ ಎಲ್ಲಿಯೂ ಹೋಗುವುದಿಲ್ಲ” ಎಂದು ಕೂಗಿ ಹೇಳಿದರು. ಇದಕ್ಕೆ ಸಿಟ್ಟಾದ ಖರ್ಗೆ, “ಮೋದಿ ಅವರ ಅಪ್ಪನೂ ಹೋಗಬೇಕು” ಎಂದು ಗುಡುಗಿದರು. ಈ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.

ಪ್ರಧಾನಿ ಮೋದಿ ಅವರ ದಿವಂಗತ ತಂದೆಗೆ ಅವಮಾನ ಮಾಡಿದ ಆರೋಪದಡಿ, ಬಿಜೆಪಿಯು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಾಟ್ನಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೇ 24 ಗಂಟೆಗಳಲ್ಲಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ. ಖರ್ಗೆ ಅವರ ಈ ಹೇಳಿಕೆಗಳು ಪ್ರಧಾನಿ ಮೋದಿ ವಿರುದ್ಧದ ವೈಯಕ್ತಿಕ ದಾಳಿ ಎಂದು ಬಿಜೆಪಿ ತಿಳಿಸಿದೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.. ದೇಶದ ಜನರ ಬಳಿ ಖರ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ತಡೆದರು. ಈ ವೇಳೆ ಬ್ಯಾರಿಕೇಡ್‌ ಹತ್ತಿ ಮುನ್ನುಗಲು ನಾಯಕರು ಯತ್ನಿಸಿದ ಕಾರಣ ವಿಪಕ್ಷ ನಾಯಕರಾದ ಅಶೋಕ್, ಛಲವಾದ ನಾರಾಯಣಸ್ವಾಮಿ, ಶಾಸಕರಾದ ಎನ್. ರವಿಕುಮಾರ್, ಸಿ.ಕೆ. ರಾಮಮೂರ್ತಿ, ಡಾ. ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular