ಇದು ಯಾವುದೇ ಒಬ್ಬ ವ್ಯಕ್ತಿಯ ಜಯವಲ್ಲ, ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ಜಯ: ಖರ್ಗೆ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಸಾಗಿದ ಪ್ರದೇಶದಲ್ಲಿ ಕಾಂಗ್ರೆಸ್ ಶೇಕಡ 99 ರಷ್ಟು ಜಯಗಳಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿದ 99 ರಷ್ಟು ಕ್ಷೇತ್ರಗಳಲ್ಲಿ ಜಯಗಳಿಸಿದೆ. ಇದು ಭಾರತ್ ಜೋಡೋ ಯಾತ್ರೆಯ ದೊಡ್ಡ ಸಾಧನೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ಮಲ್ಲಿಕಾರ್ಜುನ ಖರ್ಗೆ, ಇದು ಯಾವುದೇ ಒಬ್ಬ ವ್ಯಕ್ತಿಯ ಜಯವಲ್ಲ. ಇದು ಕರ್ನಾಟಕ ಜನತೆಯ ಗೆಲುವು. 35 ವರ್ಷಗಳ ನಂತರ ನಮಗೆ ದೊಡ್ಡ ಬಹುಮತ ದೊರೆತಿದೆ. ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರ ಅಹಂಕಾರಕ್ಕೆ ಸೋಲಾಗಿದೆ. ಸಂವಿಧಾನದ ರಕ್ಷಣೆಗೆ ಜನ ಮತ ಹಾಕಿದ್ದಾರೆ ಎಂದು ಹೇಳಿದ ಅವರು, ಮೊದಲ ಸಂಪುಟದಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read