HomeIndiaಹೊಸ ಪಾರ್ಟನರ್ ಗಳು ಜೊತೆಯಾಗಲಿದ್ದಾರೆ: ಸರ್ಕಾರ ರಚನೆ ಬಗ್ಗೆ ಭಾರೀ ಕುತೂಹಲ ಮೂಡಿಸಿದ ಖರ್ಗೆ ಹೇಳಿಕೆ

ಹೊಸ ಪಾರ್ಟನರ್ ಗಳು ಜೊತೆಯಾಗಲಿದ್ದಾರೆ: ಸರ್ಕಾರ ರಚನೆ ಬಗ್ಗೆ ಭಾರೀ ಕುತೂಹಲ ಮೂಡಿಸಿದ ಖರ್ಗೆ ಹೇಳಿಕೆ

ನವದೆಹಲಿ: ಕೆಲವು ಹೊಸ ಪಾರ್ಟನರ್ ಗಳು ನಮ್ಮೊಂದಿಗೆ ಜೊತೆಗೂಡಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುತೂಹಲ ಮೂಡಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತಾಗಿ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಸರ್ಕಾರ ರಚನೆ ಕುರಿತಾಗಿ ಪ್ರತಿಕ್ರಿಯೆ ನೀಡಿ, ಕೆಲವು ಹೊಸ ಪಾರ್ಟನರ್ ಗಳು ಜೊತೆಯಾಗಲಿದ್ದಾರೆ. ನಾವು ಏನೇ ಹೇಳಿದರೂ ಮೋದಿ ಹುಷಾರಾಗಿ ಬಿಡುತ್ತಾರೆ. ಹಾಗಾಗಿ ಈಗ ಏನೂ ಹೇಳುವುದಿಲ್ಲ. ನಾಳೆ ಇಂಡಿಯಾ ಮೈತ್ರಿಕೂಟದ ಸಭೆ ಇದೆ. ಅಲ್ಲೇ ಎಲ್ಲವನ್ನು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಂವಿಧಾನ ಉಳಿಸಲು ಹೋರಾಟ ಮಾಡಬೇಕಿತ್ತು. ಮೋದಿ, ಅಮಿತ್ ಶಾ ಎಲ್ಲವನ್ನು ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದರು. ಇಡೀ ಆಡಳಿತ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ್ದೆವು. ನಾವು ಕೇವಲ ರಾಜಕಾರಣಕ್ಕಾಗಿ ಹೋರಾಟ ಮಾಡಿಲ್ಲ. ಸಂವಿಧಾನ ಉಳಿಸಲು ಹೋರಾಟ ಮಾಡಿದೆವು. ಇಂಡಿಯಾ ಮೈತ್ರಿಕೂಟದ ನಾಯಕರ ಜೊತೆ ನಾಳೆ ಸಭೆ ನಡೆಸಿ ನಾವು ಸರ್ಕಾರ ಮಾಡುತ್ತೇವೆಯೋ ಇಲ್ಲವೋ ನಾಳೆ ಹೇಳುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular