HomeIndiaBIG NEWS: ಉತ್ತರ ಪ್ರದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ...?

BIG NEWS: ಉತ್ತರ ಪ್ರದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ…?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಐ.ಎನ್.ಡಿ.ಎ.ಐ. ಮೈತ್ರಿಕೂಟದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆದಿದೆ. ಈ ಮೂಲಕ ದಲಿತರು ಮತ್ತು ಮುಸ್ಲಿಂ ಸಮುದಾಯದ ಮತಗಳನ್ನು ಸೆಳೆದು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವುದು ಈ ಕಾರ್ಯತಂತ್ರದ ಉದ್ದೇಶವಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯ ಪ್ರತಿನಿಧಿಸುವುದರಿಂದ ಉತ್ತರ ಪ್ರದೇಶದ ಮೀಸಲು ಕ್ಷೇತ್ರ ಒಂದರಿಂದ ಅವರು ಸ್ಪರ್ಧಿಸಿದರೆ ಗೆಲುವು ಸುಲಭವಾಗಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಅವರ ಸ್ಪರ್ಧೆಯಿಂದ ದಲಿತರು ಮತ್ತು ಮುಸ್ಲಿಂಮರ ಸಮುದಾಯದ ಮತಗಳನ್ನು ಸೆಳೆಯಬಹುದು. ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಬಹುದು ಎಂಬುದು ನಾಯಕರ ಲೆಕ್ಕಾಚಾರವಾಗಿದ್ದು, ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular