ಬೆಂಗಳೂರು : ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನವಾಗಿದ್ದು, ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಅವರು ದೀರ್ಘ ಕಾಲ ಆರೋಗ್ಯಕರ ಜೀವನ ನಡೆಸಲಿ ಎಂದು ಮೋದಿ ಶುಭಾಶಯ ಕೋರಿದ್ದಾರೆ.
ಅದೇ ರೀತಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಶುಭ ಹಾರೈಸಿದ್ದಾರೆ / ಎಐಸಿಸಿ ಅಧ್ಯಕ್ಷರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ನಿಮಗೆ ತುಂಬಾ ಪ್ರೀತಿ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಪಣ್ಣ ಮಲ್ಲಿಕಾರ್ಜುನ್ ಖರ್ಗೆ (ಜನನ 21 ಜುಲೈ 1942) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, 16 ನೇ ಲೋಕಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಇವರು ಭಾರತ ಸರ್ಕಾರದಲ್ಲಿ ಮಾಜಿ ರೈಲ್ವೆ ಸಚಿವರಾಗಿದ್ದರು ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು. ಇಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
https://twitter.com/narendramodi/status/1682223422544445440?ref_src=twsrc%5Etfw%7Ctwcamp%5Etweetembed%7Ctwterm%5E1682223422544445440%7Ctwgr%5E326605be123ebd26f9f8217cf7b24d897561c1f9%7Ctwcon%5Es1_&ref_url=https%3A%2F%2Fvistaranews.com%2Fkarnataka%2Fnarendra-modi-rahul-gandhi-wish-mallikarjun-kharge-on-his-birthday%2F406290.html