HomeKarnatakaBIG NEWS: ಸಿಎಂ ರೇಸ್ ನಲ್ಲಿದ್ದಾರ ಮಲ್ಲಿಕಾರ್ಜುನ ಖರ್ಗೆ? ಸ್ವತಃ ಖರ್ಗೆ ಹೇಳಿದ್ದೇನು?

BIG NEWS: ಸಿಎಂ ರೇಸ್ ನಲ್ಲಿದ್ದಾರ ಮಲ್ಲಿಕಾರ್ಜುನ ಖರ್ಗೆ? ಸ್ವತಃ ಖರ್ಗೆ ಹೇಳಿದ್ದೇನು?

ಕಲಬುರಗಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಈಗಾಗಲೇ ಸಿಎಂ ಇದ್ದಾರೆ. ಹಾಗಾಗಿ ಬದಲಾವಣೆ ವಿಚಾರವಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇದೇ ವೇಳೆ ಖರ್ಗೆ ಅವರೇ ಸಿಎಂ ಆದರೆ ಉತ್ತಮ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂಗಿದೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾಯಕತ್ವ ಬದಲಾವಣೆ ವಿಚಹರವಾಗಿ ರಾಜ್ಯದಲ್ಲಿನ ಗೊಂದಲಗಳನ್ನು ಆದಷ್ಟು ಬೇಗನೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚೆಗೆ ಕಾಂಗ್ರೆಸ್‌ನ 40-50 ಶಾಸಕರು ದೆಹಲಿಗೆ ಟಿಕೆಟ್ ಕಾಯ್ದಿರಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಖರ್ಗೆ ಅವರೇ ಸಿಎಂ ಆದರೆ ಉತ್ತಮ ಎಂಬ ಗೃಹ ಸಚಿವ ಪರಮೇಶ್ವರ್​​ ಹೇಳಿಕೆಗೂ ಉತ್ತರಿಸಿದ ಅವರು, ನಾನಾದರೆ ಉತ್ತಮ ಅಂತ ನೀವು ಹೇಳ್ತೀರಿ, ಅವರು ಹೇಳ್ತಾರೆ, ಮೇಲಿನವರು ಹೇಳ್ತಾರೆ. ಈಗಾಗಲೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರೆ. ಬದಲಾವಣೆ ಆಗಬೇಕೆಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ನಾವು ಸೇರಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ, ನೋಡೋಣ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರೂ ಕರ್ನಾಟಕ ಸಿಎಂ ರೇಸ್ ಗೆ ಎಂಟ್ರಿ ಕೊಟ್ಟಿದ್ದಾರಾ? ಎಂಬ ಚರ್ಚೆ ಆರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular