HomeKarnatakaBIG NEWS: ಕಾಂಗ್ರೆಸ್ ಗೆ ಕೈ ಕೊಟ್ಟ ಶೆಟ್ಟರ್: ಡಿ.ಕೆ.ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ನೀಡಿದ...

BIG NEWS: ಕಾಂಗ್ರೆಸ್ ಗೆ ಕೈ ಕೊಟ್ಟ ಶೆಟ್ಟರ್: ಡಿ.ಕೆ.ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ನೀಡಿದ ಎಐಸಿಸಿ ಅಧ್ಯಕ್ಷ ಖರ್ಗೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಏಕಾಏಕಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವ ಮೊದಲು ಯೋಚಿಸಬೇಕು. ಅವರ ಹಿನ್ನಲೆ, ಸಿದ್ಧಾಂತ, ಪಕ್ಷ ನಿಷ್ಠೆಯ ಬಗ್ಗೆ ಅರಿವನ್ನು ಹೊಂದಿರಬೇಕು. ಹೀಗೆ ಬಂದು ಹಾಗೇ ಹೋದರು ಎನ್ನುವಂತಾಗಬಾರದು. ಇನ್ಮುಂದೆ ಪಕ್ಷಕ್ಕೆ ಬರುವವರ ತತ್ವ ಸಿದ್ಧಾಂತಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ಸಂದೇಶ ರವಾನಿಸಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷ ತೊರೆದ ಬಗ್ಗೆಯೂ ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular