BIG NEWS: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ; ಯಾರು ಇಂತಹ ಕೆಲಸ ಮಡ್ತಾರೆ ಅವರಿಗೆ ಬುದ್ಧಿಬರಬೇಕು ಎಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಎಸ್ಐಟಿ ರಚನೆಯಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

ಕಿಡ್ನ್ಯಾಪ್ ಕೇಸ್ ನಲ್ಲಿ ಹೆಚ್.ಡಿ.ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಯಾರು ಇಂತಹ ಕೆಲಸ ಮಡ್ತಾರೆ ಅವರಿಗೆ ಬುದ್ಧಿಬರಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.

ಹತ್ತಾರು ವರ್ಷಗಳಿಂದ ಈ ರೀತಿ ನಡೆಯುತ್ತಿದೆ ಎನ್ನುತ್ತಿದ್ದಾರೆ. ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ. ಕಾನೂನು ಕಠಿಣವಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಈ ಪ್ರಕರಣವನ್ನು ಯಾರೂ ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read