ಸಂಸತ್ತಿನಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ…!

ಜಾತಿಗಣತಿ ವಿಚಾರ ರಾಜ್ಯದಲ್ಲಿ ಆಡಳಿತ ಪಕ್ಷದ ನಾಯಕರಲ್ಲಿಯೇ ಪರ – ವಿರೋಧದ ಅಭಿಪ್ರಾಯಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮೊದಲಾದವರು ವ್ಯತಿರಿಕ್ತ ನಿಲುವು ಹೊಂದಿದ್ದರು.

ಇದರ ಮಧ್ಯೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಹಿರಂಗಗೊಳಿಸುವ ಪರವಿದ್ದು, ಇದೇ ವಿಚಾರ ರಾಜ್ಯಸಭೆಯಲ್ಲೂ ಪ್ರಸ್ತಾಪಕ್ಕೆ ಬಂದಿದೆ. ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ, ಜಾತಿ ಗಣತಿ ವಿಚಾರದಲ್ಲಿ ಕರ್ನಾಟಕ ನಾಯಕರಲ್ಲಿ ತದ್ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಆದರೂ ರಾಹುಲ್ ಗಾಂಧಿ ಜಾತಿಗಣತಿ ವಿಷಯವನ್ನು ಎತ್ತಿಕೊಂಡು ದೇಶದಾದ್ಯಂತ ಓಡಾಡುತ್ತಿದ್ದಾರೆ. ಕರ್ನಾಟಕದಲ್ಲಿ ಆಡಳಿತದಲ್ಲಿರುವ ನಿಮ್ಮ ಪಕ್ಷ ಜಾತಿ ಗಣತಿ ವರದಿ ಬಹಿರಂಗ ಮಾಡುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರೂ ಸೇರಿದಂತೆ ಮೇಲ್ವರ್ಗದ ಜನ ಜಾತಿಗಣತಿ ವರದಿಯನ್ನು ವಿರೋಧಿಸುತ್ತಿದ್ದಾರೆ. ಈ ರೀತಿಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರನ್ನು ತುಳಿಯಲು ಮುಂದಾಗಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಾತಿ ಗಣತಿ ವರದಿ ಬಹಿರಂಗಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸ್ವಪಕ್ಷೀಯ ನಾಯಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read