HomeKarnatakaBREAKING: ರಾಜ್ಯಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

BREAKING: ರಾಜ್ಯಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ, ಚುನಾವಣಾ ಅಧಿಕಾರಿಯಾಗಿರುವ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಕರ್ನಾಟಕದ 4 ಸ್ಥಾನ ಸೇರಿ 24 ಸ್ಥಾನಗಳಿಗೆ ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಸಾಥ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದರು. ಇದೇ ವೇಳೆ ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ಸ್ಥಳದಿಂದ ತೆರಳಿದರು.

ಇನ್ನು ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿಖಾನ್‌ ಅವರು ಕೂಡ ರಾಜ್ಯಸಭೆ ಸದಸ್ಯರಾಗಲು ನಾಮಪತ್ರ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular