HomeKarnatakaBREAKING: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

BREAKING: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ದಿನದಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಡಿಕೆಶಿ ಅವರಿಗೆ ಸಿಹಿ ಸುದ್ದಿಯ ಗಿಫ್ಟ್ ನೀಡಲಿದ್ದಾರೆ ಎಂಬ ಶಾಸಕರ ಹೇಳಿಕೆಗಳು ಭಾರಿ ಕುತೂಹಲ ಮೂಡಿಸಿತ್ತು. ಈ ಎಲ್ಲಾ ಬೆಳವಣಿಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ಬಗೆಹರಿಯಲಿದೆ. ಸದ್ಯಕ್ಕಂತೂ ಸಿಎಂ ಬದಲಾವಣೆ ಇಲ್ಲ. ಬದಲಾವಣೆ ಮಾಡಬೇಕು ಎಂದಾದಾಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ನಾವೆಲ್ಲ ನಾಯಕರು ಸೇರಿ ಚರ್ಚೆ ಮಾಡುತ್ತೇವೆ. ಆದರೆ ಈಗ ಅಂತಹ ಯಾವುದೇ ಸಂದರ್ಭ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ. ಹಾಗಾಗಿ ಈ ವಿಚಾರ ಬರುವುದಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸುವ ಮುಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕರು ನೀಡುತ್ತಿದ್ದ ಹೇಳಿಕೆಗಳು, ಗೊಂದಲಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪೂರ್ಣವಿರಾಮ ಇಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular