HomeKarnatakaBREAKING: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

BREAKING: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುಅನ್ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಭಂಧನ ಭೀತಿಯಲ್ಲಿದ್ದ ಮುತ್ಯಾ, ನಿರೀಕ್ಷಣ ಅಜಾಮೀನು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ, ವಿಶೇಷ ಪೋಕ್ಸೋ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಧೀಶರಾದ ಮರುಳುಸಿದ್ದರಾಧ್ಯ ಅವರು ಮುತ್ಯಾ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದರಿಂದಾಗಿ ಮುತ್ಯಾಗೆ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಿದ್ದು, ಬಂಧನ ಭೀತಿ ಇನ್ನಷ್ಟು ಹೆಚ್ಚಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುರುವ ಮುತ್ಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular