HomeKarnatakaಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ, ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದೇ ಹೆಸರಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಅವರ ಕತ್ತು ಹಿಸುಕಿ ಹಿಂಸಿಸಿ ವಿಕೃತವಾಗಿ ಆನಂದಪಡುವ ವಿಲಕ್ಷಣ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಲ್ಲದೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಅಪುರ ಠಾಣೆಯಲ್ಲಿ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧನ ಭೀತಿಯಲ್ಲಿರುವ ಮಲ್ಲಿಕಾರ್ಜುನ ಮುತ್ಯಾ, ತಲೆಮರೆಸಿಕೊಂಡಿದ್ದು, ಈಗ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ತಾಅನು ಎಲ್ಲಿಯೂ ನಾಪತ್ತೆಯಾಗಿಲ್ಲ. ಬೇರೆ ಬೇರೆ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ದೃಶ್ಯ ತಪ್ಪಾಗಿ ಭಾವಿಸಲಾಗಿದೆ, ತಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸಿರುವಂತದ್ದು ಅದಲ್ಲಿ ಏನೂ ಇಲ್ಲ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿರೋ ವಿಡಿಯೋ ವೈರಲ್ ಆಗ್ತಿದ್ದಂತೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡು ಯಾದಗಿರಿ ಎಸ್‌ಪಿಗೆ ತನಿಖೆಗೆ ಸೂಚನೆ ನೀಡಿದೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಕೂಡಲೇ ಅಲರ್ಟ್ ಆದ ಪೊಲೀಸರು, ಪೋಕ್ಸೋ ಕೇಸ್ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಕೇಸ್ ದಾಖಲಾಗುತ್ತಿದ್ದಂತೆಯೇ ಮುತ್ಯಾ ಪರಾರಿಯಾಗಿದ್ದಾನೆ. ಇನ್ನು ಮಠದತ್ತ ಭಕ್ತರು ದೌಡಾಯಿಸುತ್ತಿದ್ದು, ಮುತ್ಯಾನಬೆಂಬಲಕ್ಕೆ ನಿಂತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular