HomeIndiaSIR ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸ್ವತಃ ವಾದ ಮಂಡಿಸಿದ ಸಿಎಂ ಮಮತಾ ಬ್ಯಾನರ್ಜಿ

SIR ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸ್ವತಃ ವಾದ ಮಂಡಿಸಿದ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಅಪರೂಪದ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್ ಐಆರ್ ಹೆಸರಲ್ಲಿ ಒತ್ತಡ ಹೇರಲಾಗುತ್ತಿದೆ ಎಂದು ಕಿಡಿಕಾರಿದರು.

ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ ಅಪರೂಪದ ಘಟನೆಗೆ ಸರ್ವೋಚ್ಛ ನ್ಯಾಯಾಲಯ ಸಾಕ್ಷಿಯಾಯಿತು. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ-ಎಸ್ ಐಆರ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ನಿಂದ ವಿಶೇಷ ಅನುಮತಿ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಕ್ರಮದ ವಿರುದ್ಧ ಹರಿಹಾಯ್ದರು. ಅಲ್ಲದೇ ಎಸ್ ಐಆರ್ ಒತ್ತಡದಿಂದಾಗಿ ಪಶ್ಚಿಮ ಬಂಗಾಳದಲ್ಲಿ 150 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಡಿ ಬಿಡಿಯಾಗಿ ವಿವರಿಸಿದರು.

ಎಸ್ ಐಆರ್ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ ವಾಟ್ಸಾಪ್ ಆಯೋಗ ಎಂದು ಕುಟುಕಿದರು. ಪಶ್ಚಿಮ ಬಂಗಾಳದಲ್ಲಿ ಸುಮಾರು 1.30 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಮೈಕ್ರೋ ಆಬ್ಸರ್ವರ್ ಗಳನ್ನು ನೇಮಿಸುವ ಮೂಲಕ ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ್ ಕಾರ್ಡ್ ಆಗಲಿ, ವಸತಿ ಪತ್ರವನ್ನಗಲಿ ಪರಿಗಣಿಸದೇ ಚುನಾವಣಾ ಆಯೋಗ ಈ ರೀತಿ ಮಾಡುತ್ತಿರುವುದು ಪ್ರಶ್ನಾರ್ಹವಾಗಿದೆ ಎಂದು ಗುಡುಗಿದರು. ನಾನು ಚುನಾವಣಾ ಆಯೋಗಕ್ಕೆ ಈಗಾಗಲೇ ಎಲ್ಲಾ ವಿವರಗಳನ್ನು ಒಳಗೊಂಡು ಆರು ಪತ್ರಗಳನ್ನು ಬರೆದಿದ್ದೇನೆ. ಆದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ತಿಳಿಸಿದರು. ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿ ಸುದೀರ್ಘ ವಾದ ಮಂಡಿಸಿದರು.

ಈ ವೇಳೆ ಸಿಜೆಐ ಸೂರ್ಯಕಾಂತ್ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿರ್ದೇಶನಗಳನ್ನು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೆ ಉತ್ತರಿಸಿದ ಮಮತಾ ಬ್ಯಾನರ್ಜಿ ನ್ಯಾಯದ ನಿರೀಕ್ಷೆಯಲ್ಲಿದ್ದು, ಕೃತಜ್ಞರಾಗಿರುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular