HomeIndiaಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಮಮತಾ ಬ್ಯಾನರ್ಜಿ: ಕಾಂಗ್ರೆಸ್ ಪ್ರಬಲವಾಗಿರುವೆಡೆ ಬೆಂಬಲಿಸುವುದಾಗಿ...

ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಮಮತಾ ಬ್ಯಾನರ್ಜಿ: ಕಾಂಗ್ರೆಸ್ ಪ್ರಬಲವಾಗಿರುವೆಡೆ ಬೆಂಬಲಿಸುವುದಾಗಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಮ್ಮ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ.

ಮುಂಬರುವ ಚುನಾವಣಾ ಹೋರಾಟದಲ್ಲಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಸಂಭಾವ್ಯ ಯೋಜನೆಯ ಕುರಿತು ಮಮತಾ ಬ್ಯಾನರ್ಜಿ ಮೊದಲ ಬಾರಿಗೆ ಟಿಎಂಸಿಯ ನಿಲುವನ್ನು ಬಹಿರಂಗಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಎಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ. ನಾವು ಅವರಿಗೆ ಬೆಂಬಲ ನೀಡುತ್ತೇವೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅವರು ಇತರ ರಾಜಕೀಯ ಪಕ್ಷಗಳನ್ನು ಸಹ ಬೆಂಬಲಿಸಬೇಕು ಎಂದು ಟಿಎಂಸಿ ವರಿಷ್ಠರು ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬೆಂಬಲವನ್ನು ಪಡೆಯಲು, ಕಾಂಗ್ರೆಸ್ ಇತರ ಪಕ್ಷಗಳಿಗೂ ಸಹಾಯ ಮಾಡಬೇಕು. ಸೀಟು ಹಂಚಿಕೆ ಕಾರ್ಯವಿಧಾನವು ಪ್ರಾದೇಶಿಕ ನಾಯಕರಿಗೆ ಅವರ ಭದ್ರಕೋಟೆಗಳಲ್ಲಿ ಅನುಕೂಲವನ್ನು ನೀಡುತ್ತದೆ. ಬಲಿಷ್ಠ ಪ್ರಾದೇಶಿಕ ಪಕ್ಷಗಳಿಗೆ ಆದ್ಯತೆ ನೀಡಬೇಕು ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವು ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನಸ್ಸನ್ನು ಬದಲಾಯಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular