HomeIndiaಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದ ವಿವಾದದ ನಡುವೆ ಪ್ರಧಾನಿ ಮೋದಿ ಭೇಟಿಯಾದ...

ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದ ವಿವಾದದ ನಡುವೆ ಪ್ರಧಾನಿ ಮೋದಿ ಭೇಟಿಯಾದ ಮಮತಾ ಬ್ಯಾನರ್ಜಿ

ಕೊಲ್ಕೊತ್ತ: ಪಶ್ಚಿಮ ಬಂಗಾಳಕ್ಕೆ ಅನುದಾನ ತಡೆಹಿಡಿಯುವ ವಿವಾದದ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಅವರು ಹೂಗ್ಲಿ ಮತ್ತು ನಾಡಿಯಾ ಜಿಲ್ಲೆಗಳಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಶುಕ್ರವಾರ ರಾತ್ರಿ ಕೋಲ್ಕತ್ತಾದ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಕೇಂದ್ರವು 1.18 ಲಕ್ಷ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ರಾಜ್ಯ ಸರ್ಕಾರ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಮಮತಾ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶ್ಚಿಮ ಬಂಗಾಳ ಸರ್ಕಾರವು ಸೋಮವಾರದಿಂದ ಸರಿಸುಮಾರು 30 ಲಕ್ಷ MGNREGA ಕಾರ್ಮಿಕರಿಗೆ ಬಾಕಿ ಪಾವತಿ ಪ್ರಾರಂಭಿಸಿತು, ಇದು 2,700 ಕೋಟಿ ರೂ.ಗಳಾಗಿದ್ದು, ಮಾರ್ಚ್ 2022 ರಿಂದ ಬಾಕಿ ಉಳಿದಿದೆ. ಪಶ್ಚಿಮ ಬಂಗಾಳದ MGNREGA ಬಾಕಿಯನ್ನು ಕೇಂದ್ರವು ತಡೆಹಿಡಿದ ವಿಚಾರ ಕಳೆದ ವರ್ಷದಿಂದ ರಾಜಕೀಯ ಚರ್ಚೆಯಲ್ಲಿ ಕೇಂದ್ರಬಿಂದುವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular