BIG NEWS: ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು

ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಪ್ರತಿಪಕ್ಷಗಳ ಬಲಾಬಲ ಪ್ರದರ್ಶನವನ್ನಾಗಿ ಮಾಡಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ. ಆದರೆ ಈ ನಡುವೆ ಪದಗ್ರಹಣ ಸಮಾರಂಭಕ್ಕೆ್ಕೆ ಅನಿವಾರ್ಯ ಕಾರಣಗಳಿಂದ ಹಾಜರಾಗಲುು ಸಾಧ್ಯವಾಗುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಆದಾಗ್ಯೂ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅವರು ಲೋಕಸಭೆಯಲ್ಲಿ ಟಿಎಂಸಿಯ ಉಪ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರದ ಕಾರ್ಯಕ್ರಮಕ್ಕೆ ಬಿಜೆಪಿಯೇತರ ಬಣದ ಪ್ರಮುಖ ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಇತರ ಸಹೋದ್ಯೋಗಿಗಳು ನಾಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಖುದ್ದಾಗಿ ಆಹ್ವಾನಿಸಲು ಕರೆ ಮಾಡಿದ್ದಾರೆ.

ಮಮತಾ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಸಮಾರಂಭದಲ್ಲಿ ಪಾಲ್ಗೊಳ್ಳಲು ಲೋಕಸಭೆಯಲ್ಲಿ ತೃಣಮೂಲದ ಉಪನಾಯಕ ಡಾ. ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ನೇಮಿಸಿದ್ದಾರೆ ಎಂದು ಟಿಎಂಸಿಯ ರಾಜ್ಯಸಭಾ ಸದಸ್ಯ ಡೆರೆಕ್ ಒ’ಬ್ರೇನ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಸಿಎಂ ಪ್ರಮಾಣವಚನ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

https://twitter.com/derekobrienmp/status/1659452356033933312?ref_src=twsrc%5Etfw%7Ctwcamp%5Etweetembed%7Ctwterm%5E1659452356033933312%7Ctwgr%5Ed4e6e5a66b5d168b2274a7c194e3b9761fecedac%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fdeccanherald-epaper-dh881cfe1ab97d482fb3abb8994f502a8b%2Fmamatatoskipkarnatakacmsswearinginceremony-newsid-n501181072

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read