HomeLatest NewsSHOCKING NEWS: ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಂದೆ

SHOCKING NEWS: ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಂದೆ

ನವದೆಹಲಿ: ಪತ್ನಿ ಮೇಲಿನ ಅನುಮಾನಕ್ಕೆ ಪತಿ ಮಹಾಶಯನೊಬ್ಬ ತನ್ನ ನಾಲ್ವರು ಮಕ್ಕಲೊಂಡಿಗೆ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ದೆಹಲಿಯ ಫರಿದಾಬಾದ್ ನಲ್ಲಿ ಈ ದುರಂತ ಸಂಭವಿಸಿದೆ. ಪತ್ನಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿರಬಹುದು ಎಂಬ ಶಂಕೆಗೆ ಪತಿ ಮಹಾಶಯ ತನ್ನ ನಾಲ್ವರು ಮಕ್ಕಳೊಂದಿಗೆ ರೈಲಿಗೆ ಹಾರಿದ್ದಾರೆ. ಮಕ್ಕಳು ಸೇರಿ ಐವರೂ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಬಿಹಾರದ ನಿವಾಸಿ ಮನೋಜ್ ಮಹಾತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್ ಪ್ರೆಸ್ ಚಾಲಕ ಘಟನೆಯ ಬಗ್ಗೆ ಸ್ಟೇಷನ್ ಮಾಸ್ಟರ್ ಗೆ ಮಾಹಿತಿ ನೀಡಿದ್ದಾರೆ. ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸೊದ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಬಗ್ಗೆ ಮೃತ ಮನೋಜ್ ಮಹಾತೋ ಪತ್ನಿ ಮಾತನಾಡಿದ್ದು, ತಾನು ತನ್ನ ಸಹೋದರ ಸಂಬಂಧಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದೆ. ಇಷ್ಟಕ್ಕೆ ತನ್ನ ಪತಿ ತನ್ನ ಮೇಲೆ ಅನುಮಾನಗೊಂಡು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕಣ್ಣೀರಿಟ್ಟಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

Most Popular