HomeKarnatakaಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ

ಮಹಿಳೆಯ ಎದುರಲ್ಲಿ ವ್ಯಕ್ತಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳೆಯ ಎದುರು ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ.

ಪುಲಕೇಶಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಒಂಟಿಯಾಗಿ ವಾಸವಾಗಿದ್ದ ಮಹಿಳೆಗೆ ವ್ಯಕ್ತಿಯೋರ್ವ ಕಿರುಕುಳ ನೀಡುತ್ತಿದ್ದ. ಅಸಭ್ಯವಾಗಿ ವರ್ತಿಸಿ ಬೆರಳು ತೋರುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ಮಹಿಳೆ ಸ್ಥಳೀಯರ ಸಹಾಯದಿಂದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular