ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಸಾರ್ವಜನಿಕರಿಗೆ ಭಯ ಭೀತಿ ಉಂಟು ಮಾಡಿದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತೌಸಿಫ್ ಖಾನ್ ಅಲಿಯಾಸ್ ಜಾದೂ(26) ಬಂಧಿತ ಆರೋಪಿ. ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರೀಲ್ಸ್ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ಈತನ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ತೌಸಿಫ್ ಖಾನ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತೌಸಿಫ್ ಖಾನ್ ರೀಲ್ಸ್ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ದೃಶ್ಯ ಗಮನಿಸಿದ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

