HomeLatest Newsದೇವರ ಬಗ್ಗೆ ಅಪಮಾನದ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅರೆಸ್ಟ್

ದೇವರ ಬಗ್ಗೆ ಅಪಮಾನದ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅರೆಸ್ಟ್

ಹುಬ್ಬಳ್ಳಿ: ಹಿಂದೂ ದೇವರ ಬಗ್ಗೆ ಅಪಮಾನದ ಸ್ಟೇಟಸ್ ಹಾಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತಾಂಧನನ್ನು ಗಡೀಪಾರು ಮಾಡುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನೇಕಾರ ನಗರದ ದಾದಾಪೀರ ಹೆಬ್ಬಳ್ಳಿ ಎಂಬಾತ ದೇವಸ್ಥಾನವೊಂದರ ಸಮೀಪ ನಿಂತು ದೇವರಿಗೆ ಅವಮಾನ ಮಾಡಿದ ವಿಡಿಯೋಗಳನ್ನು ಸ್ಟೇಟಸ್ ಹಾಕಿದ್ದ. ಇದು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗುರುವಾರ ಹಳೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ದಾದಾಪೀರನನ್ನು ಬಂಧಿಸಿದ್ದಾರೆ.

ಈ ಸುದ್ದಿ ಹರಡುತ್ತಿದ್ದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮತಾಂಧನನ್ನು ಗಡೀಪಾರು ಮಾಡುವಂತೆ ಒತ್ತಾಯಿಸಿದ್ದಾರೆ. ಈಗಾಗಲೇ ಪ್ರಕರಣ ದಾಖಲಿಸಿ ಆರೋಪಿ ಬಂಧಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular