HomeKarnatakaಮೈಮೇಲೆ ದೇವರು ಬಂದಂತೆ ನಟಿಸಿ ದಲಿತರನ್ನು ದೇವಾಲಯದಿಂದ ಹೊರ ಕಳಿಸಿದ ವ್ಯಕ್ತಿ ಅರೆಸ್ಟ್

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತರನ್ನು ದೇವಾಲಯದಿಂದ ಹೊರ ಕಳಿಸಿದ ವ್ಯಕ್ತಿ ಅರೆಸ್ಟ್

ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಗೋಣಿ ತುಮಕೂರು ಗ್ರಾಮದಲ್ಲಿ ಪೂಜೆ ಮಾಡಿಸಲು ದೇವಾಲಯಕ್ಕೆ ಹೋಗಿದ್ದ ದಲಿತ ಸಮುದಾಯದ ನವದಂಪತಿಗಳನ್ನು ಹೊರ ಕಳುಹಿಸಿದ ಘಟನೆ ನಡೆದಿದೆ.

ನವ ದಂಪತಿ ದೇವಾಲಯಕ್ಕೆ ಹೋಗಿದ್ದಾಗ ವ್ಯಕ್ತಿಯೊಬ್ಬ ಮೈಮೇಲೆ ದೇವರು ಬಂದಂತೆ ನಟಿಸಿ ನವ ದಂಪತಿಯನ್ನು ಹೊರಗೆ ಕಳುಹಿಸಿದ್ದಾರೆ. ಗ್ರಾಮದ ಕೆಪಿಟಿಸಿಎಲ್ ನೌಕರ ಜಗದೀಶ್ ಇತ್ತೀಚೆಗೆ ಮದುವೆಯಾಗಿದ್ದ ತಮ್ಮ ತಂಗಿ ಮತ್ತು ಆಕೆಯ ಪತಿಯನ್ನು ಗ್ರಾಮದ ಆದಿಶಕ್ತಿ ಅರಸಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸಲು ಕರೆದುಕೊಂಡು ಹೋಗಿದ್ದಾರೆ.

ದೇವಾಲಯದ ಒಳಗೆ ಪ್ರವೇಶಿಸಿ ಪೂಜಾ ಸಾಮಗ್ರಿಗಳನ್ನು ನೀಡಿದಾಗ ಅಲ್ಲೇ ಇದ್ದ ನಾರಾಯಣಪ್ಪ ತನ್ನ ಮೇಲೆ ದೇವರು ಬಂದಂತೆ ನಟಿಸಿ, ಕೆಳಜಾತಿಯವರು ದೇವಾಲಯದ ಒಳಗೆ ಬರಬಾರದು, ಹೊರಗೆ ಹೋಗಿ ಎಂದು ಹೊರಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾರಾಯಣಪ್ಪ ಸೇರಿ ಐದು ಜನರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದು, ನಾರಾಯಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular