ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.