ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

ವಿಮಾನದೊಳಗೆ ಪ್ರಯಾಣಿಕರ ಅನುಚಿತ ವರ್ತನೆ ಸರಣಿ ಮುಂದುವರೆದಿದ್ದು, ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನ ಬಂಧಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೆಹಾರಿ ಚೌಧರಿ ಎಂಬುವರನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ಮಾರ್ಚ್ 16 ರಂದು ಮಧ್ಯರಾತ್ರಿ 1.30 ರ ಸುಮಾರಿಗೆ ಇಂಡಿಗೋ ಫ್ಲೈಟ್ 6E 716 ನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಧೂಮಪಾನ ಮಾಡುತ್ತಿದ್ದರು.

ವಿಮಾನದ ಸಿಬ್ಬಂದಿ ಶೌಚಾಲಯದಿಂದ ಸಿಗರೇಟ್ ವಾಸನೆ ಬರುತ್ತಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನ ನಿಲ್ದಾಣ ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read