HomeIndiaಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ 'ಮಾರ್ಫ್' ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ಮಾರ್ಫ್’ ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ‘ಮಾರ್ಫ್ ಮಾಡಿದ ಮತ್ತು ಎಡಿಟ್ ಮಾಡಿದ’ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಜಸ್ಥಾನದ ಪ್ರತಾಪ್‌ಗಢದಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಬಿಪಿನ್ ಕುಮಾರ್ ಸಿಂಗ್ ಶಾಂಡಿಲ್ಯ ಎಂದು ಗುರುತಿಸಲಾಗಿದ್ದು, ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮಾರ್ಚ್ 14 ರವರೆಗೆ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರತಾಪಗಢ ಎಸ್ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳ ವಿರುದ್ಧ ಲತಾ ಶರ್ಮಾ ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕನ ಮಾರ್ಫ್ ಮಾಡಲಾದ ವಿಡಿಯೋಯೊ ಗಮನಕ್ಕೆ ಬಂದಾಗ, ತಕ್ಷಣ ಟ್ವೀಟ್ ಅನ್ನು ತೆಗೆದುಹಾಕುವಂತೆ ಆರೋಪಿಗೆ ಟ್ವಿಟರ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಆರೋಪಿಯು ಎಚ್ಚರಿಕೆ ನಿರ್ಲಕ್ಷಿಸಿದ ನಂತರ ಅಧಿಕಾರಿಗಳು ಟ್ವೀಟ್ ನಿರ್ಬಂಧಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular