HomeCrimeBIG NEWS: ಸೋಶಿಯಲ್‌ ಮೀಡಿಯಾದಲ್ಲಿ ಪ್ರಧಾನಿ ಮೋದಿಗೆ ಅವಹೇಳನ; RTI ಕಾರ್ಯಕರ್ತನ ವಿರುದ್ಧ ಕೇಸ್

BIG NEWS: ಸೋಶಿಯಲ್‌ ಮೀಡಿಯಾದಲ್ಲಿ ಪ್ರಧಾನಿ ಮೋದಿಗೆ ಅವಹೇಳನ; RTI ಕಾರ್ಯಕರ್ತನ ವಿರುದ್ಧ ಕೇಸ್

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗುಲಾಮ್ ಖಾಜಿ ಎಂದು ಗುರುತಿಸಲಾಗಿದ್ದು ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರಧಾನಿ ಮತ್ತು ಇತರ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಗಳನ್ನು ಹಾಕಿದ್ದಾರೆ ಎಂದು ಸಾಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಖಾಜಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 509, 500,506 (2) ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನ್ನ ಪ್ರದೇಶದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯದ ಬಗ್ಗೆ ಆರೋಪಿ ಕೋಪಗೊಂಡಿದ್ದ.

ಹೀಗಾಗಿ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದ. ಪ್ರಧಾನಿ ಮೋದಿ ಸೇರಿದಂತೆ ಸ್ಥಳೀಯ ನಾಯಕರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.

For Latest News Updates, Join Our Whatsapp Community🚩
RELATED ARTICLES

Most Popular