ಪಾರ್ಕಿಂಗ್ ವಿಚಾರಕ್ಕೆ ಜಗಳ; ಏರ್ ಗನ್ ತೋರಿಸಿ ಬೆದರಿಕೆ

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಏರ್ ಗನ್ ತೋರಿಸಿ ವ್ಯಕ್ತಿಯೊಬ್ಬನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈನ ಆಂಟೊಪ್ ಹಿಲ್ ಪೊಲೀಸರು 35 ವರ್ಷದ ಆರೋಪಿಯನ್ನ ಬಂಧಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಕೈಯಲ್ಲಿ ಏರ್ ಗನ್ ಹಿಡಿದು ಮತ್ತೊಬ್ಬ ವ್ಯಕ್ತಿಗೆ ಬೆದರಿಸಿರುವುದನ್ನ ನೋಡಬಹುದು. ಜಗಳದ ವೇಳೆ ಆತನ ಜೊತೆಗಿದ್ದ ಮಹಿಳೆ ಆರೋಪಿಯನ್ನು ತಡೆಯಲು ಯತ್ನಿಸಿದರಾದರೂ ಆತ ನಿಂದಿಸುವುದನ್ನು ಮುಂದುವರಿಸಿ ವ್ಯಕ್ತಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಬಂಧಿತ ಆರೋಪಿಯನ್ನು ನಿತಿನ್ ಅರೋರಾ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನಿಂದ ಏರ್ ಗನ್ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 504 ಮತ್ತು 506 (II) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತಿನ್ ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

https://www.youtube.com/watch?v=fAqLkD1muSM

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read