ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸ್ಖಲನ ಮಾಡಿದ ವ್ಯಕ್ತಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಹಪ್ರಯಾಣಿಕರು

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ದುರ್ವರ್ತನೆ ತೋರಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೆಟ್ರೋ ರೈಲಿನಲ್ಲಿಯೇ ವ್ಯಕ್ತಿ ಹಸ್ತಮೈಥುನ ಮಾಡಿ ಬಾಲಕಿ ಮೇಲೆ ಸ್ಖಲನ ಮಾಡಿರುವ ಘಟನೆ ನಡೆದಿದೆ.

ದೆಹಲಿ ಮೆಟ್ರೋದ ರೆಡ್ ಲೈನ್ ನಲ್ಲಿ ಬುಧವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದೆ. ರಕ್ಷಾಬಂಧನವಾಗಿದ್ದರಿಂದ ಮೆಟ್ರೋದಲ್ಲಿ ಕಿಕ್ಕಿರಿದು ಜನರು ತುಂಬಿದ್ದರು. ತಾಯಿ ಹಾಗೂ ಮಗಳು ಕೂಡ ಅದೇ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಬಾಲಕಿಯ ಮೇಲೆ ಸ್ಖಲನ ಮಾಡಿದ್ದಾನೆ. ಇದನ್ನು ಗಮನಿಸಿದ ತಾಯಿ ತಕ್ಷಣ ತನ್ನ ಮಗಳನ್ನು ಕರೆದುಕೊಂಡು ಸೀಲಂಪುರ ನಿಲ್ದಾಣದಲ್ಲಿ ಇಳಿದಿದ್ದಾರೆ.

ಈ ಘಟನೆ ಗಮನಿಸಿದ ಇಬ್ಬರು ಸಹಪ್ರಯಾಣಿಕರು ಆರೋಪಿಯನ್ನು ಹಿಡಿದು ಶಾಹದಾರ ನಿಲ್ದಾಣದಲ್ಲಿರುವ ದೆಹಲಿ ಮೆಟ್ರೋ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಮೆಟ್ರೋ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದು, ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read