Shocking: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ; ವ್ಯಕ್ತಿ ಸಜೀವ ದಹನ

ರಾಷ್ಟ್ರ ರಾಜಧಾನಿಯ ಚಾಣಕ್ಯಪುರಿ ಪ್ರದೇಶದ ಬಿಜವಾಸನ್ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೊಬ್ಬರು ಸಜೀವ ದಹನಗೊಂಡಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಸುಮಾರು 10:32ಕ್ಕೆ ಈ ಘಟನೆ ನಡೆದಿದೆ. ತಕ್ಷಣ ಕಾರ್ಯಪ್ರವೃತ್ತರಾದ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ನಂತರ ಸುಟ್ಟು ಕರಕಲಾದ ಕಾರನ್ನು ಪರಿಶೀಲಿಸಿದಾಗ ಅದರೊಳಗೆ ಸಂಪೂರ್ಣವಾಗಿ ಸುಟ್ಟುಹೋದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರು ಮತ್ತು ಬೆಂಕಿಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ಈ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ. ಇದು ಕೇವಲ ಅಪಘಾತವೋ ಅಥವಾ ಬೇರೆ ಯಾವುದೇ ದುಷ್ಕೃತ್ಯವೋ ಎಂಬ ಬಗ್ಗೆಯೂ ತನಿಖೆ ಮುಂದುವರೆದಿದೆ.

ಇನ್ನೊಂದು ಘಟನೆಯಲ್ಲಿ, ನವದೆಹಲಿಯ ಸೈನಿಕ ಎನ್‌ಕ್ಲೇವ್ ಪ್ರದೇಶದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read