ಬೀಚ್ ನಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ: ಸ್ನೇಹಿತನ ಗುಪ್ತಾಂಗ ಕತ್ತರಿಸಿದ ವ್ಯಕ್ತಿ

ಒಡಿಶಾದ ಕೇಂದ್ರಪಾರ ಜಿಲ್ಲೆಯ ಕಡಲತೀರದಲ್ಲಿ ಭಾನುವಾರ 32 ವರ್ಷದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ ಗುಪ್ತಾಂಗವನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಗಬತ್ ದಾಸ್(30) ಮತ್ತು ಅವರ ಸ್ನೇಹಿತ ಅಕ್ಷ್ಯ ರೌತ್ ರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೆಂಥಾ ಬೀಚ್‌ ನಲ್ಲಿ ಮದ್ಯ ಸೇವಿಸುತ್ತಿದ್ದಾಗ ಅವರ ನಡುವೆ ಮಾರಾಮಾರಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ರೌತ್ ಹರಿತವಾದ ಆಯುಧದಿಂದ ದಾಸ್ ಅವರ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ನಂತರ ರೂಟ್ ಸ್ಥಳದಿಂದ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಸ್ ಅವರನ್ನು ಮೊದಲು ರಾಜನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದರೆ ನಂತರ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read