HomeKarnatakaBIG NEWS : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಆಫೀಸ್ ಕಚೇರಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

BIG NEWS : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಆಫೀಸ್ ಕಚೇರಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮಹಡಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಪ್ರೇಮ್ ಬಾಸ್ಕಿ ಎಂಬಾತ ತಾಲ್ಲೂಕು ಕಛೇರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ದ್ವಜಾರೋಹಣದ ವೇಳೆ ಅವಘಡ; ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ: 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ದೇಶದಾದ್ಯಂತ ಮನೆ ಮಾಡಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ವೇಳೆ ಅವಘಡ ಸಂಭವಿಸಿದೆ.

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದ ವೇಳೆ ಪರೇಡ್ ನಿರ್ಗಮನ ಮಾಡುತ್ತಿದ್ದಾಗ ಮೂವರು ಶಾಲಾ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಧ್ವಜಾರೋಹಣ ನೆರವೇರಿಸಿದ್ದರು. ಬಳಿಕ ಪಥಸಂಚಲನ ನಡೆದ ದಳದಲ್ಲಿ ಆದರ್ಶ ಶಾಲೆಯ ವಿದಾರ್ಥಿಗಳು ಪಾಲ್ಗೊಂಡಿದ್ದರು. ವಿವಿಧ ದಳಗಳಲ್ಲಿ ಪರೇಡ್ ನಡೆಸಿ ಸುಸ್ತಾದ ಮೂವರು ವಿದ್ಯಾರ್ಥಿಗಳು ಪಥಸಂಚಲನ ಇನ್ನೇನು ಮುಕ್ತಾಯ ಹಂತಕ್ಕೆ ಬಂದಾಗ ಕುಸಿದು ಬಿದ್ದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular