ಕಲಬುರಗಿ: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷದ ಚಂದ್ರಕಾಂತ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರುಮ್ಮನಗೂಡ ಗ್ರಾಮದ ನಿವಾಸಿಯಾಗಿರುವ ಚಂದ್ರಕಾಂತ್ ಸಾಲ ಮಾಡಿ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡಿದ್ದರು ಎನ್ನಲಾಗಿದ್ದು, ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ನಾಗೂರ ಸೇತುವೆಯ ಸಮೀಪ ಬೈಕ್ ನಿಲ್ಲಿಸಿ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಗಾಂವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

