ಬೆಂಗಳೂರು: ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮೃತನನ್ನು ವೈಶಾಕ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.’ಕೃಷಿ ತಾಪಂಡ’ ಮನೆಯಲ್ಲೇ ಉಳಿದುಕೊಂಡಿದ್ದ ವೈಶಾಕ್ ನಿನ್ನೆ ರಾತ್ರಿ 8 :30 ಕ್ಕೆ ಕರೆ ಮಾಡಿ ನಾನು ಸಾಯುತ್ತೇನೆ ಎಂದು ಹೇಳಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಹೆಚ್ಚಿನ ಮಾಹಿತಿ ಶೀಘ್ರವೇ ಅಪ್ ಡೇಟ್ ಆಗಲಿದೆ.

