ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳುರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಸುಮಾರು 30 ವರ್ಷದ ವ್ಯಕ್ತಿಯ ಮೃತದೇಹ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿರುವ ಗುರುತು ಪತ್ತೆಯಾಗಿದೆ. ಬೇರೆಡೆ ಹತ್ಯೆಗೈದು ಶವ ತಂದು ಸುಟ್ಟು ಹಾಕಿರುವ ಅನುಮಾನ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
