ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಮುಂಬಾರು ಸಮೀಪದ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿರಿಯೋಗಿ ಗ್ರಾಮದ ದೇವರಾಜ್(42) ಮೃತಪಟ್ಟವರು. ದೇವರಾಜ್ ಮನೆಯಿಂದ ಹೊರಗೆ ಹೋದವರು ರಾತ್ರಿ 9 ಗಂಟೆ ಸುಮಾರಿಗೆ ಮರಳಿ ಮನೆಗೆ ಬಂದಿದ್ದಾರೆ. ಮನೆಯ ಮುಂಭಾಗದ ಮೆಟ್ಟಿಲು ಹತ್ತುವಾಗ ಎಡವಿ ಬೀಳುವ ವೇಳೆ ಆಕಸ್ಮಿಕವಾಗಿ ಕೈಯಲ್ಲಿದ್ದ ನಾಡ ಬಂದೂಕಿದುಕಿನ ಟ್ರಿಗರ್ ಒತ್ತಿದ ಪರಿಣಾಮ ಗುಂಡು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರ ಪತ್ನಿ ದೂರು ನೀಡಿದ್ದು, ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read