ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್ಸ್ಟೇಬಲ್ ಸೇರಿ ಇಬ್ಬರು ಪೊಲೀಸರ ವಿರುದ್ಧ ಪ್ರಕರಣ ಕಲಿಸಲಾಗಿದೆ.
ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಸ್ತೋಡಿಯಲ್ ಡೆತ್ ಅಡಿ ಕೇಸ್ ದಾಖಲಾಗಿದೆ. ಮೃತ ಖಲೀಲ್ ಅವರ ಪತ್ನಿ ಶೈನಾಜ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಗರಿಬೊಮ್ಮನಹಳ್ಳಿ ಠಾಣೆ ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ಇಟಗಿ ಎ1, ಪೊಲೀಸ್ ಕಾನ್ಸ್ಟೇಬಲ್ ವೆಂಕಟೇಶ್ ಎ2 ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮುಂದುವರೆಯಲಿದೆ. ಬೆಳಗ್ಗೆಯಿಂದಲೂ ಪೊಲೀಸ್ ಠಾಣೆಯಲ್ಲಿ ಎಸ್ಪಿ ಜಾಹ್ನವಿ ಮೊಕ್ಕಾಂ ಹೂಡಿದ್ದಾರೆ.

