HomeKarnatakaಕಾಂಗ್ರೆಸ್ ಸಮಾವೇಶಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು: ಕೆಪಿಸಿಸಿ ಅಧ್ಯಕ್ಷ ಡಿಕೆ 5 ಲಕ್ಷ...

ಕಾಂಗ್ರೆಸ್ ಸಮಾವೇಶಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು: ಕೆಪಿಸಿಸಿ ಅಧ್ಯಕ್ಷ ಡಿಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಅವರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಬಸಪ್ಪ ದಿಢೀರ್ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ಜನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಸಪ್ಪ ಪಾಮೇನಹಳ್ಳಿ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ನಿವಾಸಿಯಾಗಿರುವ ಬಸಪ್ಪ ಅವರ ಕುಟುಂಬದವರಿಗೆ ಪರಿಹಾರ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular