HomeIndiaಎದೆ ನೋವಿನ ನಡುವೆಯೂ ಆಟೋ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಸಾವು....!

ಎದೆ ನೋವಿನ ನಡುವೆಯೂ ಆಟೋ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಸಾವು….!

ತೀವ್ರ ಎದೆ ನೋವಿನ ನಡುವೆಯೂ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಂಗಮಾಲಿಯಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ವಡಕನ್ ವಿಡು ಸಮೀಪದ ಜೋಸ್ ಪುರಂ ನಿವಾಸಿ 39 ವರ್ಷದ ಸುನೀಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಅವರು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದು, ಮೃತನ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ. ಸುನೀಶ್ ಅಂಗಮಾಲಿಯ ಹಳೆ ಉಪ ಟ್ರಜರಿ ಕಛೇರಿ ರಸ್ತೆಯ ಆಟೋ ಸ್ಟ್ಯಾಂಡ್ ನಲ್ಲಿ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular