ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಶ್ರೀಮಂತ(20) ಮೃತಪಟ್ಟವರು ಎಂದು ಹೇಳಲಾಗಿದೆ. ತಂತಿ ಬದಲಾಯಿಸಲು ವಿದ್ಯುತ್ ಕಂಬ ಹತ್ತಿದ್ದ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಶ್ರೀಮಂತ ಮೃತಪಟ್ಟಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
