HomeLatest Newsಅಪ್ರಾಪ್ತೆ ಅಪಹರಿಸಿ ಅತ್ಯಾಚಾರ: ಕಾಮುಕನಿಗೆ 20 ವರ್ಷ ಜೈಲು

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ: ಕಾಮುಕನಿಗೆ 20 ವರ್ಷ ಜೈಲು

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ರಾಜಾಸಾಬ ಹಳ್ಳಿಕೇರಿ ಮೇಲಿನ ಆರೋಪ ಸಾಬೀತಾಗಿದ್ದು, ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ) ಅಪರಾಧಿಗೆ ಶಿಕ್ಷೆ ವಿಧಿಸಿದೆ.

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ರಾಜಾಸಾಬ ಹಳ್ಳಿಕೇರಿ ಬಾಲಕಿಗೆ ಪರಿಚಯ ಮಾಡಿಕೊಂಡು ಸಲುಗೆಯಿಂದ ಮಾತನಾಡಿಸುತ್ತ ಪ್ರೀತಿಸುವುದಾಗಿ ಹೇಳಿದ್ದು ನೀನು ಪ್ರೀತಿಸದಿದ್ದರೆ ಸಾಯುವುದಾಗಿ ಹೆದರಿಕೆ ಹಾಕಿರುತ್ತಾನೆ. ಹೀಗೆ ಸುಮಾರು ವರ್ಷಗಳಿಂದ ಕದ್ದು ಮುಚ್ಚಿ ಮಾತನಾಡುತ್ತ ವಿಷಯವನ್ನು ಯಾರಿಗೂ ಹೇಳದಂತೆ ತಾಕೀತು ಮಾಡಿದ್ದು, ಈ ವಿಷಯ ಬಾಲಕಿ ಮನೆಯವರಿಗೆ ಗೊತ್ತಾಗಿ ಬುದ್ದಿವಾದ ಹೇಳಿದರೂ ಕೇಳದೇ ದಿ: 31-01-2022 ರ ರಾತ್ರಿ 7-30 ಗಂಟೆ ಸುಮಾರಿಗೆ ಅಳವಂಡಿಯ ಕಾಲೇಜ ಹತ್ತಿರ ಆರೋಪಿತನು ಬಾಲಕಿಯನ್ನು ಕರೆಯಿಸಿಕೊಂಡು ಓಡಿ ಹೋಗಿ ಮದವೆಯಾಗೋಣ ಎಂದು ಪುಸಲಾಯಿಸಿ ಮೋಟಾರ ಸೈಕಲ್ ಮೇಲೆ ತಳಕಲ್ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಲ್ಲಿನ ಮುಸ್ಲಿಂ ದರ್ಗಾದ ಮುಂದೆ ಬಾಲಕಿ ಅಪ್ರಾಪ್ತಳು ಎಂದು ತಿಳಿದಿದ್ದರೂ ತಾಳಿ ಕಟ್ಟಿ ಬಾಲ್ಯ ವಿವಾಹವಾಗಿರುತ್ತಾನೆ.

ಅಲ್ಲಿಂದ ನಿಟ್ಟಾಲಿ ಗ್ರಾಮಕ್ಕೆ ಹೋಗಿ ರಾತ್ರಿಯಾಗಿದ್ದರಿಂದ ಅಲ್ಲಿನ ಬಸ್ ನಿಲ್ದಾಣದಲ್ಲಿ ಮಲಗಿಕೊಂಡು ಭಾನಾಪುರಕ್ಕೆ ಬಂದು ಮೋಟಾರ್ ಸೈಕಲ್ ಬಿಟ್ಟು ರೇಲ್ವೆ ಹಾಗೂ ಬಸ್ ಮೂಲಕ ಮಂಗಳೂರಿನ ಸುಳ್ಯಕ್ಕೆ ಹೋಗುವಾಗ ಮಾರ್ಗ ಮಧ್ಯೆ ಬಾಲಕಿ ಮಾವನಿಗೆ ಪೋನ್ ಮಾಡಿ ಬಾಧಿತಳನ್ನು ನನಗೆ ಕೊಟ್ಟು ಮದುವೆ ಮಾಡಿಕೊಡಬೇಕು. ಇಲ್ಲದಿದ್ದರೆ ಹೆಣ ನೋಡಬೇಕಾಗುತ್ತದೆ ಎಂದು ಹೆದರಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಪೋನಿನಲ್ಲಿದ್ದ ಸಿಮ್ ತೆಗೆದು ಬಿಸಾಕಿ ಸಾಕ್ಷಿ ಪುರಾವೆ ನಾಶಪಡಿಸಿರುತ್ತಾನೆ. ನಂತರ ಸುಳ್ಯದಲ್ಲಿ ಈ ಹಿಂದೆ ಕೆಲಸ ಮಾಡಿದ ಸಿಮೆಂಟ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಅಂಗಡಿ ಹಿಂದಿರುವ ರೂಮಿನಲ್ಲಿ ವಾಸವಾಗಿದ್ದ ಅವಧಿಯಲ್ಲಿ ರಾತ್ರಿ ಸಮಯದಲ್ಲಿ ಆರೋಪಿತನು ಬಾಲಕಿ ಮೇಲೆ 3 ಸಲ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಅಳವಂಡಿ ಪೋಲಿಸ್ ಠಾಣೆಯ ಶಿಲ್ಪಾ ಶೆಟ್ಟರ್ ಪಿಎಸ್‌ಐ ಇವರು ದೂರು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ, ಗೀತಾ ಬೆನಹಾಳ ಡಿಎಸ್‌ಪಿ ಕೊಪ್ಪಳ ಇವರು ಮುಂದಿನ ತನಿಖೆಯನ್ನು ನಿರ್ವಹಿಸಿ ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಶಿವಕುಮಾರ ಸಿಹೆಚ್‌ಸಿ ಡಿಎಸ್‌ಪಿ ಕಛೇರಿ ಇವರು ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸಿರುತ್ತಾರೆ.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿದ್ದರಿಂದ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ದಿ: 06-08-2025 ರಂದು ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಅಳವಂಡಿ ಪೋಲಿಸ್ ಠಾಣೆಯ ಸಿಬ್ಬಂದಿ ರಾಘವೇಂದ್ರ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ. ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಛೇರಿಯ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular