ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿರುವ ವ್ಯಕ್ತಿಯ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಶನಿವಾರ (ಜುಲೈ 12) ತಿರುವಲ್ಲೂರು ಜಿಲ್ಲೆಯಲ್ಲಿ ಗುಮ್ಮಿಡಿಪೂಂಡಿ ಪಟ್ಟಣದ ಬಳಿ ನಡೆದಿದೆ.
ಅಪರಾಧ ನಡೆದು ಐದು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸಲಾಗಿಲ್ಲ ಎನ್ನಲಾಗಿದೆ.
ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥ ಕೆ. ಅಣ್ಣಾಮಲೈ ತಮ್ಮ ಎಕ್ಸ್ ಖಾತೆಯಲ್ಲಿ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದು, ಅಪರಾಧಿಯನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. 10 ವರ್ಷದ ಬಾಲಕಿ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆರೋಪಿ ಆಕೆಯ ಅಪಹರಣಕ್ಕೆ ಯತ್ನಿಸಿದ್ದರು.
ವರದಿಯ ಪ್ರಕಾರ, ಅಪ್ರಾಪ್ತ ಬಾಲಕಿಯು ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿ ಗುಮ್ಮಿಡಿಪೂಂಡಿಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಕ್ಲಿಪ್ನಲ್ಲಿ, ಆರೋಪಿಯು ಆಕೆಯ ಹಿಂದೆ ನಡೆದುಕೊಂಡು ಹೋಗುತ್ತಿರುವುದನ್ನು ಮತ್ತು ಆಕೆಯನ್ನು ಹಿಡಿದು ಪೊದೆಗಳ ಪಕ್ಕಕ್ಕೆ ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಬಾಲಕಿ ಘಟನೆಯ ಬಗ್ಗೆ ತನ್ನ ಅಜ್ಜಿಗೆ ತಿಳಿಸಿದ್ದು, ಅವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗಿದ್ದು, ಈ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ.
திருவள்ளூர் மாவட்டம் கும்மிடிப்பூண்டி அருகே, கடந்த சனிக்கிழமை அன்று, சாலையில் நடந்து சென்ற பத்து வயது சிறுமியை, வாயை மூடிக் கடத்திச் சென்று பாலியல் வன்கொடுமை செய்த சிசிடிவி காட்சி, நெஞ்சைப் பதைபதைக்க வைக்கிறது.
— K.Annamalai (@annamalai_k) July 16, 2025
குற்றம் நடந்து ஐந்து நாட்கள் கடந்தும், இன்னும் குற்றவாளி கைது… pic.twitter.com/P6G7h5kTWU