HomeIndiaರೆಸ್ಟೋರೆಂಟ್ ನಲ್ಲಿ ಎಸಿ ಯುನಿಟ್ ಸ್ಫೋಟ: ಓರ್ವ ಸಾವು, ಮತ್ತೊಬ್ಬ ಗಂಭೀರ

ರೆಸ್ಟೋರೆಂಟ್ ನಲ್ಲಿ ಎಸಿ ಯುನಿಟ್ ಸ್ಫೋಟ: ಓರ್ವ ಸಾವು, ಮತ್ತೊಬ್ಬ ಗಂಭೀರ

ಮುಂಬೈ: ಹವಾನಿಯಂತ್ರಣದ ಹೊರಾಂಗಣ ಘಟಕದಲ್ಲಿ ಸ್ಫೋಟದಿಂದಾಗಿ ಗಾಯಗೊಂಡ 50 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಭಾನುವಾರ ಮೃತಪಟ್ಟಿದ್ದು, ಅವರ ಸಹೋದ್ಯೋಗಿ ಚಿಂತಾಜನಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ತಾರಾನಾಥ್ ಮತ್ತು ಸುಜಿತ್ ಪಾಲ್(33) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ 20 ಅಂತಸ್ತಿನ ಕಾರ್ಪೊರೇಟ್ ಕಟ್ಟಡದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಎಸಿ ಹೊರಾಂಗಣ ಘಟಕವನ್ನು ದುರಸ್ತಿ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ತಾರಾನಾಥ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದರೆ, ಪಾಲ್ ಅವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುರ್ಲಾದ ನಾಗರಿಕ-ಭಾಭಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾರಾನಾಥ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಿಧನರಾಗಿದ್ದಾರೆ. ಪಾಲ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular