ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ: ಮಾವನನ್ನೇ ಕೊಂದ ಅಳಿಯ

ಜಲ್ನಾ: ಮಾಜಿ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಾವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಅಂಬಾದ್‌ನ ಶಾರದಾ ನಗರದಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಆರೋಪಿಯು ಪೈಥಾನ್‌ ನ ಅದೂಲ್ ನಿವಾಸಿಯಾಗಿದ್ದು, ಆತನ ಪತ್ನಿ ತನ್ನ ಪ್ರಿಯಕರನೊಂದಿಗೆ ಔರಂಗಾಬಾದ್‌ ಗೆ ತೆರಳಿದ್ದಾಳೆ. ಕೋಪಗೊಂಡ ಅವನು ತನ್ನ ಮಾವನನ್ನು ಭೇಟಿಯಾಗಿ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದು ತನ್ನ ಮಾವನನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧಿಸಲು ಮುಂದಾಗಿದ್ದೇವೆ ಎಂದು ಇನ್ಸ್‌ ಪೆಕ್ಟರ್ ಶಿರೀಷ್ ಹುಂಬೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read