ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ಪುಸಲಾಯಿಸಿ ಲೈಂಗಿಕ ಕಿರುಕುಳ: ಅರೆಸ್ಟ್

ಮಂಡ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆ ಭಾರತೀನಗರದಲ್ಲಿ ವೃದ್ಧನನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್ 5ರಂದು ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ 9 ವರ್ಷದ ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದಳು. ಆಕೆಯನ್ನು ಪುಸಲಾಯಿಸಿದ ಸಿದ್ದರಾಮು(62) ಎಂಬ ವೃದ್ಧ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತಾಗಿ ಬಾಲಕಿಯ ತಾಯಿ ದೂರು ನೀಡಿದ್ದು, ಭಾರತೀನಗರ ಠಾಣೆ ಪೋಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read