HomeKarnatakaರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ನೋಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೈಯಾಲಿ ಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ರಸ್ತೆಯಲ್ಲಿ ಯುವತಿಯರನ್ನು ಕಂಡರೆ ಅದರಲ್ಲಿಯೂ ಯುವತಿಯರು ಒಂಟಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದರೆ ಅವರನ್ನು ಹಿಂಬಾಲಿಸಿ, ಸಮಯ ನೋಡಿಕೊಂಡು ಅವರನ್ನು ತಬ್ಬಿ ಅಸಭ್ಯವಾಗಿ ವರ್ತಿಸುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಾಗಿ ಒಂಟಿ ಯುವತಿಯರೇ ಈತನ ಟಾರ್ಗೆಟ್. ನಡು ರಸ್ತೆಯಲ್ಲೇ ಯುವತಿಯರನ್ನು ಹಿಡಿದು ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದ. ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಬಂಧಿಸಿ ವಿಚಾರಣೆ ನಡೆಸಿದಾಗ ಆತ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ರಿಪೇರಿಗೆ ಬಂದ ಬೈಕ್ ಗಳನ್ನೇ ತೆಗೆದುಕೊಂಡು ನಗರದಲ್ಲಿ ಸುತ್ತಾಡಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯರನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಎಸ್ಕೇಪ್ ಆಗುತ್ತಿದ್ದ ಎಂಬ ಸಂಗತಿ ಬಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular