HomeKarnatakaಆಸ್ತಿ ವಿಚಾರಕ್ಕೆ ಪೆಟ್ರೋಲ್ ಸುರಿದು ವ್ಯಕ್ತಿ ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಆಸ್ತಿ ವಿಚಾರಕ್ಕೆ ಪೆಟ್ರೋಲ್ ಸುರಿದು ವ್ಯಕ್ತಿ ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ವ್ಯಕ್ತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಶಿವಮೊಗ್ಗ ತಾಲ್ಲೂಕಿನ ಬೆಳಲಕಟ್ಟೆ ಗ್ರಾಮದ ಮಹೇಶಪ್ಪ ಹಾಗೂ ಅಪರಾಧಿಗಳಾದ ಕುಮಾರ್ ಮತ್ತು ಕಾರ್ತಿಕ್ ನಡುವೆ ಜಮೀನು ವಿಚಾರವಾಗಿ ಗಲಾಟೆ ನಡೆದಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ 2023ರ ಡಿಸೆಂಬರ್ 3ರಂದು ಇಬ್ಬರೂ ಸೇರಿ ಹುಣಸವಾಡಿ ಸರ್ಕಲ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹೇಶಪ್ಪನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪಿಐ ಸತ್ಯನಾರಾಯಣ್ ಅವರು ತನಿಖೆ ನಡೆಸಿ ಆರೋಪಿತರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತಾ ಬಿ.ಎಸ್. ಅವರು ವಾದ ಮಂಡಿಸಿದ್ದರು. ಆರೋಪಿತರ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಅಭಯ್ ಧನಪಾಲ್ ಚೌಗಲ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು 57 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular