HomeAutoಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಮರ್ಸಿಡಿಸ್ ಕಾರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಮರ್ಸಿಡಿಸ್ ಕಾರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸೈಕಲ್ ನಲ್ಲಿ ಹೋಗುತ್ತಿದ್ದ 35 ವರ್ಷದ ವ್ಯಕ್ತಿಗೆ ಐಷಾರಾಮಿ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಗಾರ್ಡನರ್ ಆಗಿ ಕೆಲಸ ಮಾಡುತ್ತಿದ್ದ 35 ವರ್ಷದ ರಾಜೇಶ್ ಮೃತಪಟ್ಟವರಾಗಿದ್ದು, ಅವರು ಬೆಳಗ್ಗೆ ಕೆಲಸಕ್ಕೆ ತೆರಳುವಾಗ ಅತಿ ವೇಗವಾಗಿ ಬಂದ ಮರ್ಸಿಡಿಸ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡ ರಾಜೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಅಪಘಾತದ ನಂತರ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದು ನಂತರ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಕಾರು ಚಾಲಕ ನೋಯ್ಡಾ ನಿವಾಸಿಯಾದ 45 ವರ್ಷದ ಪ್ರದೀಪ್ ಗೌತಮ್ ಎಂಬಾತನನ್ನು ಪೊಲೀಸರು ಬಂಧಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಮದ್ಯ ಸೇವಿಸಿದ್ದಾನಾ ಎಂಬುದನ್ನು ಪರಿಶೀಲಿಸಲು ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular