HomeLatest Newsಸರಸಕ್ಕೆ ಒಪ್ಪದ ಮಹಿಳೆ ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಸರಸಕ್ಕೆ ಒಪ್ಪದ ಮಹಿಳೆ ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ 2024ರಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಅಪರಾಧಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮೃತ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ದೇವರಾಜ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪತಿ ನಿಧನರಾದ ನಂತರ ಮಹಿಳೆ ತವರು ಮನೆ ಯರಡೋಣದಲ್ಲಿ ವಾಸವಾಗಿದ್ದರು. ಈ ವೇಳೆ ದೇವರಾಜ ಮಹಿಳೆ ಜೊತೆಗೆ ಸಲುಗೆ ಬೆಳೆಸಿ ಅಕ್ರಮ ಸಂಬಂಧ ಹೊಂದಿದ್ದ. 2024ರ ಮಾರ್ಚ್ 10ರಂದು ಇಬ್ಬರು ಜೊತೆಯಾಗಿ ದೇವಾಲಯಕ್ಕೆ ಹೋಗಿ ಗ್ರಾಮಕ್ಕೆ ಮರಳುವಾಗ ಲಿಂಗಸುಗೂರಿನಲ್ಲಿ ಹಳ್ಳದ ದಂಡೆಯ ಪೊದೆಯಲ್ಲಿ ತನ್ನೊಂದಿಗೆ ಮಲಗಲು ಸಹಕರಿಸದ ಕಾರಣ ದೇವರಾಜ ಮಹಿಳೆಯನ್ನು ಕೊಲೆ ಮಾಡಿದ್ದ. ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಟ್ಟಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular