Shocking News: ಗೆಳತಿ​ ತಾಯಿ ಹಾಗೂ ಸಹೋದರನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಪಿ

25 ವರ್ಷದ ಯುವಕನೊಬ್ಬ ತನ್ನ ಪ್ರಿಯತಮೆ ತಾಯಿ ಮತ್ತು ಸಹೋದರನಿಗೆ ಬೆಂಕಿ ಹಚ್ಚಿದಂತಹ ಬೆಚ್ಚಿ ಬೀಳಿಸುವ ಘಟನೆಯು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಇವರೆಲ್ಲರಿಗೆ ಬೆಂಕಿ ಹಚ್ಚಿದ ಬಳಿಕ ಆರೋಪಿ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂವರು ಮೃತರನ್ನು 45 ವರ್ಷದ​ ಭೋಂಡೆ, 20 ವರ್ಷದ ಪ್ರಣಯ್​ ಸುರೇಶ್​ ರಾವ್​ ಭೋಂಡೆ ಹಾಗೂ ಆರೋಪಿ ಆಶಿಶ್​ ಠಾಕ್ರೆ ಎಂದು ಗುರುತಿಸಲಾಗಿದೆ.

ಆರೋಪಿಯು ತನ್ನ ಗೆಳತಿಯೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸಿಸುತ್ತಿದ್ದ ಎನ್ನಲಾಗಿದೆ. ಆದರೆ ಕೆಲವು ವಿಷಯಗಳಿಗಾಗಿ ಜಗಳವಾಡಿದ ನಂತರ ಕೆಲವು ತಿಂಗಳ ಹಿಂದೆ ಇಬ್ಬರೂ ಬೇರ್ಪಟ್ಟಿದ್ದರು. ಇದೇ ಜಗಳದ ಪರಿಣಾಮವಾಗಿ ಆಶಿಶ್​ ಗೆಳತಿಯ ತಾಯಿ ಹಾಗೂ ಸಹೋದರನಿಗೆ ಬೆಂಕಿ ಹಚ್ಚಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಈಗ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read