HomeIndiaಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲಿಯಾದ ಮೊಹಮ್ಮದ್ ರಜಾಕ್ ಥಾನಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೌರಿ ಜಿಲ್ಲೆಯ ಶಹಧರ ಷರೀಫ್ ಪ್ರದೇಶದ ಕುಂದಾ ಟಾಪ್ ಗ್ರಾಮದ ಮಸೀದಿಯಿಂದ ಹೊರಗೆ ಬಂದಾಗ ಈ ಘಟನೆ ಸಂಭವಿಸಿದೆ. ಉಗ್ರರು ಸಮೀಪದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದಕರ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರು ಭಾರತೀಯ ಸೇನೆಯ ಯೋಧನೊಬ್ಬರ ಸಹೋದರನಾಗಿದ್ದಾರೆ. ಯೋಧನನ್ನು ಹತ್ಯೆ ಮಾಡಲು ಬಂದು ಸೋದರನನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular